ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್ ಸರ್ಕಾರ ಒಂದು ಕೈನಲ್ಲಿ ಉಚಿತ ಕೊಟ್ಟು, ಮತ್ತೊಂದು ಕೈನಲ್ಲಿ ಕಿತ್ತುಕೊಳ್ಳುತ್ತಿದೆ. ಇದಕ್ಕೆ ಮತ್ತೊಂದು ಉದಾಹರಣೆ ಸಾರಿಗೆ ಇಲಾಖೆಯ ರೌಂಡಪ್‌ದಂಧೆ ಎಂದು ಜೆಡಿಎಸ್ ಆರೋಪಿಸಿದೆ.
ಪ್ರಯಾಣಿಕರಿಗೆ ಎದುರಾಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ಮುಕ್ತಿ ಹಾಡಿದ್ದೇವೆ. ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಜನರ ಪ್ರಯಾಣವನ್ನು ಇನ್ನಷ್ಟು ಸುಲಭವಾಗಿಸಲು ಕ್ಯಾಶ್‌ಲೆಸ್‌ವ್ಯವಸ್ಥೆ ಪರಿಚಯಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಾಗೂ ಸಿದ್ದರಾಮಯ್ಯ ಸರ್ಕಾರ ಬೆನ್ನು ತಟ್ಟಿಕೊಂಡಿತ್ತು ಎಂದು ಜೆಡಿಎಸ್ ದೂರಿದೆ.
ಆದರೆ, ಕೆಎಸ್‌ಆರ್‌ಟಿಸಿ ನಿರ್ವಾಹಕರು, ರೌಂಡಪ್‌ನೆಪದಲ್ಲಿ ಪ್ರಯಾಣಿಕರಿಂದ ಟಿಕೆಟ್‌ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್‌ಸರ್ಕಾರದಲ್ಲಿ ಸಚಿವರಷ್ಟೇ ಅಲ್ಲ, ಅಧಿಕಾರಿ ಮತ್ತು ಸಿಬ್ಬಂದಿ ವರ್ಗವೂ ಭ್ರಷ್ಟರಾಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.