ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿರುವುದಕ್ಕೆ ಈ ಆಘಾತಕಾರಿ ವರದಿಯೇ ಸಾಕ್ಷಿ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.
ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಲ್ಲಿ ರಾಜ್ಯದ ಮಕ್ಕಳ ಕಲಿಕಾ ಸಾಮರ್ಥ್ಯ ರಾಷ್ಟ್ರೀಯ ಸರಾಸರಿಗಿಂತ ತೀವ್ರ ಕುಸಿತ ಕಂಡಿರುವುದನ್ನು “ಪರಖ್” ರಾಷ್ಟ್ರೀಯ ಸಮೀಕ್ಷೆ(2024)ಯಲ್ಲಿ ಮಾಹಿತಿ ಬಹಿರಂಗವಾಗಿದೆ.
ಈ ವರ್ಷ ಎಸ್‌ಎಸ್‌ಎಲ್‌ಸಿ , ಪಿಯುಸಿ ಫಲಿತಾಂಶವು ಕುಸಿತ ಕಂಡಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ಮರೀಚಿಕೆಯಾಗುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಮಧು ಬಂಗಾರಪ್ಪ ನಂತಹ ಬೇಜವಾಬ್ದಾರಿ ವ್ಯಕ್ತಿ ಶಿಕ್ಷಣ ಸಚಿವರಾದರೇ ಇನ್ನೇನು ನಿರೀಕ್ಷಿಸಲು ಸಾಧ್ಯ ? ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.