ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ವಿವಿಧ ಕೈಗಾರಿಕೆಗಳ ಪುನಶ್ಚೇತನಕ್ಕೆ ವಿಶೇಷ ಕಾಳಜಿ ವಹಿಸಿ ಶ್ರಮಿಸುತ್ತಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
ರಾಜ್ಯದ ಹೆಮ್ಮೆಯ ಹೆಚ್‌ಎಂಟಿ (HMT) ಕಾರ್ಖಾನೆ ಅಭಿವೃದ್ಧಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹೆಜ್ಜೆ ಹೆಜ್ಜೆಗೂ ಅಡ್ಡಗಾಲು ಹಾಕುತ್ತಾ, ಸೇಡಿನ ರಾಜಕಾರಣ ಮುಂದುವರಿಸಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಹೆಚ್‌ಎಂಟಿ ಸ್ವಾಧೀನದಲ್ಲಿರುವ 180 ಎಕರೆ ಭೂಮಿ ವಶಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದು, ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ವಿರೋಧಿ ನಡೆಯಾಗಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

