ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಸಲ್ಮಾನರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕಲ್ಪಿಸುವ ಮೂಲಕ ಡಾ.ಬಿ. ಆರ್. ಅಂಬೇಡ್ಕರ್ ಅವರ ಚಿಂತನೆ,ಮಾರ್ಗದರ್ಶನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಮಾತ್ರವಲ್ಲದೆ ಸಂವಿಧಾನವನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹರಿಹಾಯ್ದಿದ್ದಾರೆ.
ಸಂವಿಧಾನದ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆ ಇಲ್ಲ, ಅವರು ಸಂವಿಧಾನವನ್ನು ಗೌರವಿಸುವ ಹಾಗೆ ನಾಟಕ ಮಾಡುತ್ತಾರೆ ಎಂದು ನಾವು ಆರೋಪಿಸುತ್ತಲೇ ಬಂದಿದ್ದೇವೆ, ಅದು ಈಗ ರುಜುವಾತಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮಿಸ್ಟರ್ ಪಾರ್ಟ್ ಟೈಮ್ ಪೊಲಿಟಿಶಿಯನ್ ರಾಹುಲ್ ಗಾಂಧಿ ಅವರೇ, ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವುದರಿಂದ ಏನೂಲಾಭವಿಲ್ಲ, ಅದರಂತೆ ನಡೆದುಕೊಳ್ಳಿ ಎಂದು ಬಿಜೆಪಿ ತಾಕೀತು ಮಾಡಿದೆ. ಕಾಂಗ್ರೆಸ್ಸಿನ ಸಂವಿಧಾನ ವಿರೋಧಿ ನಿಲುವನ್ನು ಬಿಜೆಪಿ ಖಂಡಿಸುತ್ತದೆ ಮತ್ತು ನ್ಯಾಯಾಲಯದಲ್ಲಿ ಹೋರಾಡಲಿದೆ. ಕರ್ನಾಟಕ ರಾಜ್ಯವೀಗ ಮುಸಲ್ಮಾನರ ಅಶಾಂತಿಯ ತೋಟವಾಗಿ ಮಾರ್ಪಟ್ಟಿದೆ! ಎಂದು ಅವರು ದೂರಿದ್ದಾರೆ.