ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ಸಣ್ಣ ವ್ಯಾಪಾರಿಗಳ ಹಗಲು ದರೋಡೆಗೆ ಇಳಿದಿದ್ದಾರೆ. ಜಿಎಸ್‌ಟಿ ಕಿರುಕುಳಕ್ಕೆ ನೇರೆ ಹೊಣೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ಆರೋಪಿಸಿದೆ.
“ಕೋತಿ ತಾನು ಮೊಸರು ತಿಂದು ಮೇಕೆ ಮೂತಿಗೆ ಒರೆಸಿತು” ಎನ್ನುವಂತೆ, ರಾಜ್ಯ ಸರ್ಕಾರ ವಾಣಿಜ್ಯ ತೆರಿಗೆ ಇಲಾಖೆ ಮೂಲಕ ಹಾಲು, ಹಣ್ಣು, ತರಕಾರಿ ವ್ಯಾಪಾರಿಗಳು ಸೇರಿದಂತೆ ಸಣ್ಣ ವರ್ತಕರಿಗೆ ಲಕ್ಷಾಂತರ ರೂ. ಜಿಎಸ್‌ಟಿ ಕಟ್ಟುವಂತೆ ನೋಟಿಸ್ ಜಾರಿಗೊಳಿಸಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಅವೈಜ್ಞಾನಿಕ ಗ್ಯಾರಂಟಿಯಿಂದ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ, ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ದಿನನಿತ್ಯದ ಅಗತ್ಯ ಅಗತ್ಯ ಸರುಕು ಸೇವಾ ವ್ಯಾಪಾರಿಗಳನ್ನೂ ಬಿಡದೆ ಜಿಎಸ್‌ಟಿ ಹೆಸರಲ್ಲಿ ಗಧಾಪ್ರಹಾರ ಮಾಡುತ್ತಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

