6 ತಿಂಗಳಾದರೂ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ನೀಡದ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲೀ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗ ಏನು ಮಾಡುತ್ತಿದ್ದೀರಿಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಬಡವರ ಮಕ್ಕಳ ಶಿಕ್ಷಣಕ್ಕೆ ದಾರಿ ದೀಪವಾಗಿರುವ ಸರ್ಕಾರಿ ಶಾಲೆಗಳು ಕರ್ನಾಟಕ ಕಾಂಗ್ರೆಸ್ ದುರಾಡಳಿತದಿಂದ ಮೂಲ ಸೌಲಭ್ಯಗಳಿಲ್ಲದೆ ನಲುಗಿಹೋಗಿವೆ.

- Advertisement - 

ಈ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ ಮಕ್ಕಳ ಶಿಕ್ಷಣವನ್ನೂ ಕಿತ್ತುಕೊಳ್ಳುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

6 ತಿಂಗಳಾದರೂ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ನೀಡಿಲ್ಲ, ಶಿಕ್ಷಕರ ನೇಮಕಾತಿಗೆ ದುಡ್ಡಿಲ್ಲ, ಶಾಲೆಗಳ ದುರಸ್ತಿಗೆ ಅನುದಾನ ವಿಲ್ಲ. ಒಟ್ನಲ್ಲಿ ಬಡ ಮಕ್ಕಳ ಭವಿಷ್ಯದ ಬಗ್ಗೆ ಕಾಂಗ್ರೆಸ್‌ಸರ್ಕಾರಕ್ಕೆ ಚಿಂತೆಯಿಲ್ಲ ಎನ್ನುವುದು ಜಗಜ್ಜಾಹೀರಾಗುತ್ತಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

- Advertisement - 

 

 

Share This Article
error: Content is protected !!
";