ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಸರ್ಕಾರ ಬಂದಾಗಿನಿಂದ ದಿನಕ್ಕೊಂದು ಲೂಟಿ ನಡೆಯುತ್ತಲೇ ಇದೆ. ಅದೇ ಪಟ್ಟಿಗೆ ಇದೀಗ ಕಸ ಗುಡಿಸುವ ಮಷಿನ್‌ಸೇರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ಕನ್ನಡಿಗರ ತೆರಿಗೆ ಹಣವನ್ನು ಕಸ ಗುಡಿಸುವ ಮಷಿನ್ ಹೆಸರಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಕಸ ಗುಡಿಸುವ ಮಷಿನ್ ಮಾರುಕಟ್ಟೆ ಬೆಲೆ 115 ಕೋಟಿ. ಕಾಂಗ್ರೆಸ್ ಗುತ್ತಿಗೆ ಬೆಲೆ 613 ಕೋಟಿ. ಎರಡರ ಮಧ್ಯೆ ಅಜಗಜಾಂತರ ವ್ಯತ್ಯಾಸವಿದೆ. ಇವರ ಲೆಕ್ಕ ನೋಡಿದರೆ ಬೆಂಗಳೂರಿನ ಕಸ ಗುಡಿಸಲು ಒಂದು ದಿನದ ಖರ್ಚು 24 ಲಕ್ಷ ತಗುಲುತ್ತದೆ.
ಕೋಟಿ ಕೋಟಿ ಲೂಟಿ ಹೊಡೆಯುತ್ತಿರುವ ಈ ಭ್ರಷ್ಟ ಸರ್ಕಾರಕ್ಕೆ ಜನ ಬುದ್ಧಿ ಕಲಿಸುವುದು ಖಚಿತ ಎಂದು ಅಶೋಕ್ ಎಚ್ಚರಿಸಿದ್ದಾರೆ.

