ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಖಾಲಿ ಇರುವ ಸಾವಿರಾರು ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡದೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಿನಾಮೇಷ ಎಣಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.
ಶಿಕ್ಷಕರು, ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಗಣನೀಯವಾಗಿ ಕುಸಿದಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ದಿವ್ಯ ನಿರ್ಲಕ್ಷ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.
ಪರಿಣಾಮ ಕಳೆದ ಎರಡು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶದ ಪ್ರಮಾಣವೂ ಕುಸಿದಿರುವುದು ಕಾಂಗ್ರೆಸ್‌ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿರುವುದಕ್ಕೆ ನಿದರ್ಶನ ಎಂದು ಜೆಡಿಎಸ್ ಹರಿಹಾಯ್ದಿದೆ.

