ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಗ್ಯಾರಂಟಿ ಎಂದರೆ ದ್ರೋಹ ! ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಅವರು ಅದೆಷ್ಟೋ ಬಾರಿ ಹೇಳಿದ್ದಾರೆ. ಆದರೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಮರೆತಂತಿದೆ ಎಂದು ಬಿಜೆಪಿ ದೂರಿದೆ.
ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ 2 ಸಾವಿರ ರೂಪಾಯಿ ಹಣ ಹಾಕುತ್ತೇವೆ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರತಿ ತಿಂಗಳು ಹಣ ಕೊಡುತ್ತೇವೆ ಅಂತ ನಾವು ಹೇಳಿಲ್ಲ ಎಂದು ಇದೀಗ ಉಲ್ಟಾ ಹೊಡೆದಿದ್ದಾರೆ.
ನೋಡಿದ್ರಾ ಮಹಾದೇವಪ್ಪಾ, ಕಾಕಾಪಾಟೀಲ್‌ನಿಮ್ಮ ಮನೆಯವರಿಗೆ ಪ್ರತಿ ತಿಂಗಳು ಹಣ ಕೊಡ್ತೀವಿ ಎಂದು ಅವರು ಗ್ಯಾರಂಟಿ ನೀಡೇ ಇಲ್ವಂತೆ ! ಎಂದು ಬಿಜೆಪಿ ವ್ಯಂಗ್ಯವಾಡಿದೆ.