ಚಂದ್ರವಳ್ಳಿ ನ್ಯೂಸ್, ಹಾಸನ:
ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದರೂ ಆ ಪಕ್ಷಕ್ಕೆ ಅಭದ್ರತೆ ಕಾಡುತ್ತಿದೆ ಎಂದು ಜೆಡಿಎಸ್ ನಾಯಕ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕರು ಬೇರೆ ಪಕ್ಷದ ಶಾಸಕರಿಗೆ ಗಾಳ ಹಾಕುತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಯತ್ನದಲ್ಲಿದ್ದಾರೆ ಎಂದು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಆರೋಪಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ಜೆಡಿಎಸ್ ಶಾಸಕರು ಮತ್ತು ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುತ್ತಿರುವ ಬಗ್ಗೆ ತನಗೆ ಮಾಹಿತಿ ಇಲ್ಲ, ಆದರೆ ಅದು ನಿಜವೇ ಆಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿರುವ ಸ್ಥಿತಿಕಂಡು ಮರುಕ ಹುಟ್ಟುತ್ತದೆ. ಅವರಿಗೆ ಅಗತ್ಯವಿದ್ದಾಗ ಮಾತ್ರ ದೇವೇಗೌಡರ ಮತ್ತು ಕುಮಾರಸ್ವಾಮಿಯ ಪಾದಕ್ಕೆ ನಮಸ್ಕರಿಸುತ್ತೇವೆ ಅನ್ನುತ್ತಾರೆ ಎಂದು ರೇವಣ್ಣ ದೂರಿದರು.