ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್”. ಭಾರತೀಯ ಕಾಂಗ್ರೆಸ್, ಕರ್ನಾಟಕ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಎಂದು ಜೆಡಿಎಸ್ ಹರಿಹಾಯ್ದಿದೆ.
ನ್ಯಾಷನಲ್‌ಹೆರಾಲ್ಡ್‌ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮೂಲಕ ಅಮ್ಮ-ಮಗ 142 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆ.
ಪ್ರಮುಖ ಆರೋಪಿಗಳಾದ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯಕ್ಕೆ ಮಹತ್ವದ ದಾಖಲೆ ಸಲ್ಲಿಸಿದೆ ಎಂದು ಜೆಡಿಎಸ್ ತಿಳಿಸಿದೆ.