ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದ ಜೊತೆ ಸಮನ್ವಯ, ಸಹಕಾರ ಕೋರುವಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರು ವಿಫಲರಾಗಿದ್ದಾರೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಕರ್ನಾಟಕ ಅಭಿವೃದ್ಧಿಗಿಂತ ಸ್ವಪ್ರತಿಷ್ಠೆಯಲ್ಲೇ ಮುಳುಗಿರುವ ಕಾಂಗ್ರೆಸ್‌ನಾಯಕರು, ಪಕ್ಕದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳನ್ನು ನೋಡಿ ಕಲಿಯಬೇಕು ಎಂದು ಜೆಡಿಎಸ್ ತಾಕೀತು ಮಾಡಿದೆ.

