ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಹುಲ್ ಗಾಂಧಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಹಾಗೂ ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ, ನಕಲಿ ಮತದಾರರು ಸೇರ್ಪಡೆಗೊಂಡಿದ್ದಾರೆಂದು ಅನೇಕ ವಿಚಾರಗಳನ್ನು ದೇಶದ ಜನತೆಯ ಮುಂದೆ ಆರೋಪ ಮಾಡಿದ್ದಾರೆ.
ರಾಹುಲ್ ಗಾಂಧಿಯವರ ಹೇಳಿಕೆಯ ನಂತರದಲ್ಲಿ ನಮ್ಮ ರಾಜ್ಯದಲ್ಲೂ ಕಾಂಗ್ರೆಸ್ಸಿನ ಹಿರಿಯ ನಾಯಕರು ಮೂರ್ಖರಂತೆ ಮಾತನಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಲೋಕಸಭೆ ವಿಸರ್ಜನೆ ಮಾಡಬೇಕು ಎಂದು ಮನಬಂದಂತೆ ಮಾತನಾಡಿರುವುದು ಗಮನಿಸಿದ್ದೇವೆ,
ವಿಶೇಷವಾಗಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಕ್ರಮಗಳು ಆಗಿದೆ ಎಂದು ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಮತದಾರರನ್ನು ಪತ್ತೆಹಚ್ಚುವ ಕೆಲಸ ಮಾಡುತ್ತಿದ್ದರೆ,
ಅದಕ್ಕೂ ರಾಹುಲ್ ಗಾಂಧಿ ಯವರು ವಿರೋಧ ಮಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಾ ದೇಶದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದರು.

