ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದ ಹತ್ತಿರ ನಡೆದ ‘ಮನರೇಗಾ ಉಳಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿ, ಕಾಂಗ್ರೆಸ್‌ನ ಮಹತ್ವಾಕಾಂಕ್ಷಿ ಯೋಜನೆಯಾದ ಮನರೇಗಾ ಹೆಸರನ್ನು ಬದಲಾಯಿಸಿ ಕೇಂದ್ರ ಬಿಜೆಪಿ ಸರ್ಕಾರವು ‘ವಿಬಿ ರಾಮ್ ಜೀ’ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಲಾಯಿತು.
ಕಾರ್ಮಿಕರ ಹಕ್ಕುಗಳಿಗಾಗಿ ಮನರೇಗಾ ಉಳಿಯಬೇಕು – ಜನರ ಧ್ವನಿ ಒಗ್ಗಟ್ಟಾಗಿ ಎದ್ದಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಪ್ರತಿಭಟನೆಯ ಅಂಗವಾಗಿ 5 ಕಿ.ಮೀ ಪಾದಯಾತ್ರೆ ನಡೆಸಿ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಬಲವಾದ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ, ಆದಿಜಾಂಬವ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು,
ಖಾದಿ.ಜೆ ರಮೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಅಧ್ಯಕ್ಷ ಎಂ.ಕೆ. ತಾಜ್ ಪೀರ್, ಗ್ಯಾರೆಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಮುಂಚೂಣಿ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

