ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರ ಅಂದರೆ ಕಾಂಗ್ರೆಸ್, ಭ್ರಷ್ಟರು ಅಂದರೆ ಕಾಂಗ್ರೆಸ್‌ಸಚಿವರು, ಶಾಸಕರು! ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
IPC 420, A1 ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಹಗಲು ದರೋಡೆ ಮಾಡುತ್ತಿದ್ದಾರೆ. ಹೀಗಿರುವಾಗ ಅವರ ಸಂಪುಟ ಸಹದ್ಯೋಗಿಗಳು ನಿರಂತರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಿಎಂ, ಸಚಿವರು, ಶಾಸಕರ ವಿರುದ್ಧ ಬಿಜೆಪಿ ಆರೋಪಿಸಿದೆ.
ಇದೀಗ ಸಚಿವ ಕೃಷ್ಣಭೈರೇಗೌಡ ಅವರು ಹುಲಿಕುಂಟೆ ಗ್ರಾಮದ ಜಮೀನು ವ್ಯವಹಾರದಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎಂದು ಬಿಜೆಪಿ ದೂರಿದೆ.
ಮಾಜಿ ಸಚಿವ ಬಿ.ನಾಗೇಂದ್ರ, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಸಂತೋಷ್ ಲಾಡ್, ಸಚಿವ ಭೈರತಿ ಸುರೇಶ್, ಸಚಿವ ಆರ್.ಬಿ.ತಿಮ್ಮಾಪುರ, ಸಚಿವ ಡಿ.ಸುಧಾಕರ್2727, ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹಾದಿಯಲ್ಲಿ ಇದೀಗ ಸಚಿವ ಕೃಷ್ಣ ಬೈರೇಗೌಡ ಅವರು ಸೇರಿಕೊಂಡಿದ್ದಾರೆ ಎಂದು ಬಿಜೆಪಿ ಟೀಕಾಪ್ರಹಾರ ಮಾಡಿದೆ.