ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ 60% ಕಮಿಷನ್‌ಆರೋಪವನ್ನು ಸ್ವತಃ ಕಾಂಗ್ರೆಸ್‌ಶಾಸಕರೇ ಬಹಿರಂಗಗೊಳಿಸಿದ್ದಾರೆ. ರಾಜ್ಯ ಸರ್ಕಾರವು ಕಮಿಷನ್‌ಬಾಕರಿಂದ ತುಂಬಿ ತುಳುಕುತ್ತಿದೆ ಎಂದು ಬಿಜೆಪಿ ಟೀಕಿಸಿದೆ.
ಎಲ್ಲಾ ಯೋಜನೆ, ಕಾಮಗಾರಿಗಳಲ್ಲಿ ಕಾಂಗ್ರೆಸ್‌ಸರ್ಕಾರ ರಾಜಾರೋಷವಾಗಿ 60% ಭ್ರಷ್ಟಾಚಾರ ನಡೆಯುತ್ತಿದೆ.
ಜಲಜೀವನ್‌ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳೆಲ್ಲವೂ ಕಳಪೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಾಖಲೆ ಸಹಿತ ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಕಾಮಗಾರಿಗಳಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು 60% ಕಮಿಷನ್‌ನುಂಗಿದರೆ ಕಾಮಗಾರಿಗಳು ಕಳಪೆಯಾಗದಿರುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.