ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಅನುದಾನದ ಕೊರತೆಯಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಮತ್ಯಾಕೆ ಅನುದಾನ ಹಂಚಿಕೆ ವಿಚಾರದಲ್ಲಿ ತಾರತಮ್ಯ ಹಾಗೂ ಪಕ್ಷಪಾತ ಮಾಡುತ್ತಿರುವುದು ? ಎಂದು ಜೆಡಿಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದೆ.
ಇತರರು ಕೋಟಿ ಕೋಟಿ ಹಣ ಪಡೆಯುತ್ತಿರುವಾಗ ವಿಜಯನಗರವನ್ನೇಕೆ ಕಡೆಗಣಿಸಲಾಗುತ್ತಿದೆ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಖಾಲಿ ‘ಕೈ’ ಸರ್ಕಾರದ ಹುಸಿ ಭರವಸೆಗಳ ವಿರುದ್ಧ ಕಾಂಗ್ರೆಸ್ ಶಾಸಕ ಗವಿಯಪ್ಪ ಅವರ ಅಸಹನೆ ಮತ್ತು ಆಕ್ರೋಶ ನ್ಯಾಯಯೋಚಿತವಾಗಿಯೇ ಇದೆ . ಅವೈಜ್ಞಾನಿಕ ಗ್ಯಾರಂಟಿಯಿಂದಾಗಿ ನಿಜವಾದ ಅಭಿವೃದ್ಧಿ ಯೋಜನೆಗಳಿಗೆ ಹಣವಿಲ್ಲದಂತೆ ಮಾಡಿದೆ ಭ್ರಷ್ಟ ಕಾಂಗ್ರೆಸ್ ಸರ್ಕಾರ.
ವೇದಿಕೆಯಲ್ಲಿ ದೊಡ್ಡ ದೊಡ್ಡ ಹುಸಿ ಭಾಷಣಗಳನ್ನು ಮಾಡುವ ಸಿದ್ದರಾಮಯ್ಯ ಸರ್ಕಾರ ನ್ಯಾಯಯುತವಾಗಿ ಕ್ಷೇತ್ರಗಳಿಗೆ ಅನುದಾನ ಹಂಚಿಕೆ ಮಾಡಲು ಕೈಲಾಗದ ದುಸ್ಥಿತಿ ತಲುಪಿದೆ ಎಂದು ಜೆಡಿಎಸ್ ಆರೋಪಿಸಿದೆ.
ಈ ಸತ್ಯವನ್ನು ಕಾಂಗ್ರೆಸ್ ಶಾಸಕ ಗವಿಯಪ್ಪ ಬಿಚ್ಚಿಟ್ಟಿದ್ದಾರೆ. ಕೊಟ್ಟಿರುವ 12 ಕೋಟಿ ರೂ. ಆಸ್ಪತ್ರೆಗೆ ಸಾಲುತ್ತಿಲ್ಲ.. ಇನ್ನಿತರ ಯೋಜನೆಗಳಿಗೆ ನಾವೇನು ಮಾಡುವುದು ಎಂದು ಪ್ರಶ್ನಿಸಿದ್ದಾರೆ ಅವರು ಪ್ರಶ್ನಿಸಿದ್ದಾರೆಂದು ಜೆಡಿಎಸ್ ತಿಳಿಸಿದೆ.
ಆದರೆ ಹಗರಣಗಳಲ್ಲಿ ಸಿಲುಕಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳುತ್ತಿಲ್ಲ. ಇದು ನಾಡಿನ ದುರಂತ. ಅಭಿವೃದ್ಧಿಗೆ ಅಡ್ಡಿಯಾದ ಕಾಂಗ್ರೆಸ್ ಅವೈಜ್ಞಾನಿಕ ಗ್ಯಾರಂಟಿ ಎಂದು ಜೆಡಿಎಸ್ ಹರಿಹಾಯ್ದಿದೆ.
ಸಿದ್ದರಾಮಯ್ಯನವರ ಸುಳ್ಳುಗಳನ್ನು ಸ್ವತಃ ಕಾಂಗ್ರೆಸ್ ಶಾಸಕರೇ ಬಯಲಿಗೆಳೆಯುತ್ತಿದ್ದಾರೆ! ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಆರ್.ಗವಿಯಪ್ಪ “ನನ್ನ ಬಳಿ ಹಣವಿಲ್ಲ; ನನ್ನ ಕ್ಷೇತ್ರದ ಜನರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ನಾನೇನು ಮಾಡಲಿ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಬಗ್ಗೆ ಅಸಹಾಯಕತೆ ಹೊರಹಾಕಿದ್ದಾರೆ.
ರಾಜ್ಯದ ಹಣ ಯಾರ ಯಾರ ಜೇಬು ಸೇರುತ್ತಿದೆ? ಎಂದು ಪ್ರಶ್ನಿಸಿರುವ ಜೆಡಿಎಸ್ ಸಮರ್ಪಕವಾಗಿ ಎಲ್ಲ ಕ್ಷೇತ್ರಗಳಿಗೂ ಅನುದಾನ ಕೊಡಿ ಮುಖ್ಯಮಂತ್ರಿಗಳೇ ಎಂದು ಜೆಡಿಎಸ್ ತಾಕೀತು ಮಾಡಿದೆ.
ಅನುದಾನಕ್ಕಾಗಿಯೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಎಚ್.ಆರ್.ಗವಿಯಪ್ಪ ಕಣ್ಣೀರು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೊಕ್ಕಸದಲ್ಲಿ ಹಣವಿಲ್ಲದ ಅನುದಾನ ಕಡಿತ. ವಿಜಯನಗರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತ. ಇದೇನಾ ಕಾಂಗ್ರೆಸ್ ನ್ಯಾಯ? ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹುಸಿ ಭರವಸೆಗಳಿಗೆ ಬೇಸತ್ತ ಸ್ವಪಕ್ಷೀಯ ಶಾಸಕರು ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.