ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್ ಮಂಡಳಿಯ ಹೆಸರಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಡೆಸುತ್ತಿದ್ದ ಲ್ಯಾಂಡ್‌ಜಿಹಾದ್‌ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಮನಗರ ಕಾಂಗ್ರೆಸ್‌ಶಾಸಕ ಇಕ್ಬಾಲ್ ಹುಸೇನ್ ಅವರು ಗ್ರಾಮಕ್ಕೆ ಗ್ರಾಮವನ್ನೇ ತನ್ನ ಹೆಸರಿಗೆ ಬರೆಸಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಭಾರತವನ್ನು ಆಕ್ರಮಿಸಿದ ಬ್ರಿಟೀಷರನ್ನೂ ಮೀರಿಸುವವರಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ನಡೆದುಕೊಳ್ಳುತ್ತಿದ್ದಾರೆ. ಇಡೀ ಗ್ರಾಮವನ್ನು ತನ್ನ ಹೆಸರಿಗೆ ಬರೆಸಿಕೊಂಡಿರುವುದು ಕಾಂಗ್ರೆಸ್‌ಶಾಸಕನ ದುರಹಂಕಾರಕ್ಕೆ ಸಾಕ್ಷಿಯಾಗಿದೆ.
ರಾಮನಗರ ಶಾಸಕ ಇಕ್ಬಾಲ್‌ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗನಾಗಿದ್ದು, ಡಿಕೆಶಿ ಅವರ ಅಕ್ರಮ ಆಸ್ತಿ ಸಂಗ್ರಹ ಚಟುವಟಿಕೆಯಿಂದ ಪ್ರಭಾವಿತರಾಗಿದ್ದಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

