ಗ್ಯಾರಂಟಿ ಯೋಜನೆ ಟೀಕಿಸುತ್ತಿರುವ ಕಾಂಗ್ರೆಸ್ ಶಾಸಕರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ಯಾರಂಟಿಗಳ ಕುರಿತು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ನಾಯಕರೇ ಟೀಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ತಮ್ಮ ಪಕ್ಷದ ಶಾಸಕರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದಕ್ಕೆ ಆಗುತ್ತಿಲ್ಲ.

ಪ್ರಧಾನಿಗಳ ಕುರಿತು ಹಗುರವಾಗಿ ಮಾತನಾಡುವುದಕ್ಕೆ ತಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಪುಡಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಧಮ್ ಇಲ್ವಾ ಮುಖ್ಯಮಂತ್ರಿಗಳೆ? ಗ್ಯಾರಂಟಿ ಜಾರಿಯಿಂದ ಗುಂಡಿ ಮುಚ್ಚುವುದಕ್ಕೂ ಹಣವಿಲ್ಲವೆಂದು ಮಲ್ಲಿಕಾರ್ಜುನ್ ಖರ್ಗೆ ಅವರು ಒಪ್ಪಿಕೊಂಡಿದ್ದಾರೆ.

ಗುಂಡಿಗಳಿಲ್ಲದ ಒಂದೇ ಒಂದು ರಸ್ತೆಯನ್ನು ಬೆಂಗಳೂರಿನಲ್ಲಿ ತೋರಿಸಿ ಕೊಟ್ರೆ ನೊಬೆಲ್ ಪ್ರಶಸ್ತಿ ಕೊಡ್ತಿವಿ ಬಿಜೆಪಿ ವ್ಯಂಗ್ಯವಾಡಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";