ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಮಹಿಳೆ ಒಬ್ಬರ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪ ಮೇಲೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ಆಪ್ತ ಆದಿತ್ಯ ನನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಜರುಗಿದೆ.
ಸಂತ್ರಸ್ತೆ ಮಹಿಳೆ ನೀಡಿದ ದೂರು ಆಧರಿಸಿ ಆರೋಪಿ ಆದಿತ್ಯನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆರೋಪಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನಲ್ಲದೆ ವಿಡಿಯೋವನ್ನ ಸಂಬಂಧಿಕರು, ಗೊತ್ತಿದ್ದವರಿಗೆ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ಆದಿತ್ಯನ ಮೇಲೆ ಹಲ್ಲೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಹಲ್ಲೆಗೆ ಸಂಬಂಧಿಸಿದಂತೆ ದೂರು ಕೊಟ್ಟರೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಹೇಳಿದ್ದಾರೆ.
ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಬ್ಲ್ಯಾಕ್ ಮೇಲ್ ಆರೋಪ ಸಂಬಂಧ ಆದಿತ್ಯನ ಮನೆಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎನ್ನುವ ಆರೋಪಿ ಕೇಳಿ ಬಂದಿದೆ.

