ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ನಯಾಪೈಸೆ ಅನುದಾನ ನೀಡಿದೆ ಬಾಯಿಮಾತಿನಲ್ಲಿ ಮಂಡಕ್ಕಿ ತಿನ್ನಿಸುತ್ತಿರುವ ಸಿದ್ದರಾಮಯ್ಯ ವಿರುದ್ಧ ಸ್ವತಃ ಕಾಂಗ್ರೆಸ್‌ಶಾಸಕರೇ ರೋಸಿಹೋಗಿದ್ದಾರೆ ಎಂದು ಜೆಡಿಎಸ್ ಲೇವಡಿ ಮಾಡಿದೆ.
ಸಿದ್ದರಾಮಯ್ಯ ಅವರ ಅತ್ಯಾಪ್ತ ಶಾಸಕ ಬಿ.ಆರ್. ಪಾಟೀಲ್‌ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ. ಕ್ಷೇತ್ರಕ್ಕೆ ಅನುದಾನಗಳು ಸಿಗುತ್ತಿಲ್ಲ, ನಮ್ಮದೇ ಪಕ್ಷ ಅಧಿಕಾರದಲ್ಲಿದ್ದರೂ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್‌ಶಾಸಕರು ಕೆರಳಿ ಕೆಂಡವಾಗಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.