ರಾಮ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶತಮಾನಗಳ ಸುದೀರ್ಘ ಹೋರಾಟ ಮತ್ತು ಕಾಯುವಿಕೆಯ ನಂತರ
, ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರವನ್ನು ನಿರ್ಮಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಕರಕಮಲಗಳಿಂದ 2024ರ ಜನವರಿ 22 ರಂದು ಭಗವಾನ್ ಶ್ರೀ ರಾಮಲಲ್ಲಾ ಪ್ರತಿಷ್ಟಾಪನೆ ನಡೆಯಿತು ಎಂದು ಬಿಜೆಪಿ ತಿಳಿಸಿದೆ.

- Advertisement - 

ಆದರೆ ರಾಮ ಮಂದಿರ ನಿರ್ಮಾಣಕ್ಕೆ ಸದಾ ವಿರೋಧ ವ್ಯಕ್ತಪಡಿಸುತ್ತಿದ್ದ ಭಾರತೀಯ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಆಹ್ವಾನ ಬಂದರೂ ಸಮಾರಂಭದಲ್ಲಿ ಭಾಗವಹಿಸಲಿಲ್ಲ ಎಂದು ಬಿಜೆಪಿ ಟೀಕಿಸಿದೆ.

- Advertisement - 

 ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಹಿಂದೂಗಳ ನಂಬಿಕೆಯನ್ನು ಯಾವಾಗಲೂ ಘಾಸಿಗೊಳಿಸುತ್ತಿದೆ ಎಂಬುದನ್ನು ಇದು ಸೂಚಿಸುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.

 

- Advertisement - 

 

Share This Article
error: Content is protected !!
";