ಕಾಂಗ್ರೆಸ್ ಪಕ್ಷದ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..?

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಹಲ್ಗಾಮ್
ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಭಾರತೀಯ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡಿನ ಕಾರ್ಯ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

- Advertisement - 

ಕಾಂಗ್ರೆಸ್, ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

- Advertisement - 

ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ್ ಮನಃಸ್ಥಿತಿಯಲ್ಲೇ ಇದೆ! ಅಸ್ತಿತ್ವ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿ!! ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ!! ಎಂದು ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ. ಆಚಾರವಿಲ್ಲದ ನಾಲಿಗೆ.. ಆಪರೇಷನ್ ಸಿಂಧೂರ ಬೂಟಾಟಿಕೆಯಂತೆ! ಇಡೀ ರಾಷ್ಟ್ರದ ಹೆಮ್ಮೆಯಾಗಿರುವ ಈ ಯಶಸ್ವಿ ಕಾರ್ಯಾಚರಣೆ ವಿರಾಟ್ ಸ್ವರೂಪವನ್ನು ಖುದ್ದು ನೋಡಬೇಕೆ ಮಂಜುನಾಥ್..? ಹಾಗಿದ್ದರೆ ಬನ್ನಿ, ನಿಮ್ಮನ್ನು ಪಾಕಿಸ್ತಾನಕ್ಕೆ ಕಳಿಸಿ ಕೊಡುತ್ತೇವೆ. ಭಾರತೀಯ ಸೇನೆಯ ಪರಾಕ್ರಮವನ್ನು ಖುದ್ದು ನೋಡಿಕೊಂಡು ಬರುವಿರಂತೆ. ಹೋಗುವಿರಾ ಪಾಕಿಸ್ತಾನಕ್ಕೆ..? ಎಂದು ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

- Advertisement - 

ಆಯೋಗಕ್ಕೆ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಜನತೆಗೆ ಟೋಪಿ ಹಾಕಿ ಚುನಾವಣೆ ಗೆದ್ದಿದ್ದ ಈ ಕಿಡಿಗೇಡಿ ಕಾಂಗ್ರೆಸ್ ಶಾಸಕ, ತನ್ನೊಳಗಿದ್ದ ವಿಷವನ್ನೇ ಕಕ್ಕಿಕೊಂಡಿದ್ದಾರೆ. ಅಂಥ ವಿಷಕಾರಿ DNA ಉಳ್ಳ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರಪ್ರೇಮವಿರಲು ಸಾಧ್ಯವೇ..? ಆಪರೇಷನ್ ಸಿಂಧೂರ್ ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೆಸ್ ನಾಯಕರ ಆಣಿಮುತ್ತುಗಳನ್ನು ಗಮನಿಸಿದರೆ ಅವರ ಪ್ರೇಮ ಯಾವ ರಾಷ್ಟ್ರದ ಮೇಲೆ ಎಂದು ತಿಳಿಯುತ್ತದೆ! ಎಂದು ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಹಾಗೆಯೇ; ಪ್ರಧಾನಿ ನರೇಂದ್ರ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನೂ ದೇಶ ಗಮನಿಸಿದೆ. ರಾಷ್ಟ್ರದ ಬಗ್ಗೆ ಅವರಿಗಿರುವ ಬದ್ಧತೆ, ಆಚಲತೆಯನ್ನು ನೋಡಿದೆ, ಕೊಂಡಾಡಿದೆ. ರಾಷ್ಟ್ರ ದ್ರೋಹ ಮತ್ತು ರಾಷ್ಟ್ರಪ್ರೇಮಕ್ಕೆ ಇರುವ ವ್ಯತ್ಯಾಸವಿದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ರಾಷ್ಟ್ರ ನಿಂದನೆ, ಸೇನೆಯ ನಿಂದನೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಲ್ಲ. ಅದು ಕಾಂಗ್ರೆಸ್ ಪಕ್ಷಕ್ಕೆ ಜನ್ಮತಃ ಅಂಟಿರುವ ಜಾಡ್ಯ. ಪಾಕಿಸ್ತಾನ್ ನ್ಯಾಶನಲ್ ಕಾಂಗ್ರೆಸ್ ಪಾರ್ಟಿಯಾಗಿ ರೂಪಾಂತರಗೊಂಡಿರುವ ಆ ಪಕ್ಷದ ಅಸಲಿ ಅಜೆಂಡಾ ಏನು? ಹಿಡೆನ್ ಹಿಡೆನ್ ಏನೆಲ್ಲಾ ಮಾಡುತ್ತಿದೆ..!? ಇದು ನನ್ನ ಮೂಲಭೂತ ಪ್ರಶ್ನೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

 

 

Share This Article
error: Content is protected !!
";