ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಡೆದ ಕನ್ನಡಿಯಂತಾದ ಕಾಂಗ್ರೆಸ್ ಪಕ್ಷ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆ ಒಪ್ಪಂದ ಆಗಿದ್ದರೆ ನಾವೆಲ್ಲಾ ಯಾಕೆ ಬೇಕು ಎಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಒಳಬೇಗುದಿ ಬಗ್ಗೆ ಒಬ್ಬ ಕೆಪಿಸಿಸಿ ಮಾಜಿ ಅಧ್ಯಕ್ಷರು, ಹಿರಿಯ ಸಚಿವರಾದ ಪರಮೇಶ್ವರ್ ಅವರಿಗೇ ಇಷ್ಟು ರೋಸಿ ಹೋಗಿದ್ದರೆ, ಇನ್ನು ಶಾಸಕರಿಗೆ, ಕಾರ್ಯಕರ್ತರಿಗೆ ಎಷ್ಟು ರೋಸಿ ಹೋಗಿರಬೇಡ ಎಂದು ಅವರು ಟೀಕಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರ ಒಳಿತಿನ ಬಗ್ಗೆಯಾಗಲಿ, ರಾಜ್ಯದ ಅಭಿವೃದ್ಧಿ ಬಗ್ಗೆಯಾಗಲಿ ಕಿಂಚಿತ್ತೂ ಕಾಳಜಿ ಇಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದೊಂದೇ ಕನ್ನಡಿಗರ ಪಾಲಿಗೆ ಉಳಿದಿರುವ ಏಕೈಕ ದಾರಿ ಎಂದು ಅಶೋಕ್ ತಿಳಿಸಿದ್ದಾರೆ.