ಕಾಂಗ್ರೆಸ್ ಪಕ್ಷಕ್ಕೆ ದಲಿತರು ಕೇವಲ ವೋಟ್ ಬ್ಯಾಂಕ್ ಅಷ್ಟೇ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂವಿಧಾನ ಉಳಿಸುತ್ತೇವೆ ಎಂದು ಹಾದಿ ಬೀದಿಯಲ್ಲಿ ನಾಟಕ ಪ್ರದರ್ಶಿಸುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರೇ, ದಲಿತ ನಾಯಕರನ್ನು ಅಧ್ಯಕ್ಷ ಮಾಡಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡರೆ ಸಾಕೇ ?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯಾವುದೇ ಅಧಿಕಾರ, ಜವಾಬ್ದಾರಿ, ನಿರ್ಣಯ ಕೈಗೊಳ್ಳುವ ಸ್ವಾತಂತ್ರ್ಯ ನೀಡದೆ ಕೀಲು ಗೊಂಬೆ ಮಾಡಿಕೊಂಡಿರುವುದು ಕಾಂಗ್ರೆಸ್ ಢೋಂಗಿತನಕ್ಕೆ ನಿದರ್ಶನ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ದಲಿತರು ಕೇವಲ ವೋಟ್ ಬ್ಯಾಂಕ್ ಅಷ್ಟೇ. ದಲಿತರನ್ನು ಉದ್ಧಾರ ಮಾಡುತ್ತೇವೆ ಎಂದು ಬಿಂಬಿಸಿಕೊಂಡೇ ಕಾಂಗ್ರೆಸ್ ಹಾಗೂ ನಕಲಿಗಾಂಧಿ ಕುಟುಂಬ ಅಂದಿನಿಂದ ಇಂದಿನವರೆಗೂ ಅಧಿಕಾರ ಅನುಭವಿಸುತ್ತಿದೆ. ರಾಹುಲ್ ಗಾಂಧಿ ಹೈಕಮಾಂಡ್ ಆದರೆ, ಎಐಸಿಸಿ ಅಧ್ಯಕ್ಷರ ಕೆಲಸವೇನು? ಅವರು ತೀರ್ಮಾನ ಕೈಗೊಳ್ಳಲು ಅಸಮರ್ಥರೇ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

