ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಪರೇಷನ್ ಸಿಂಧೂರ ಕಾರ್ಯಾಚರಣೆಗೆ ಮೊದಲೇ ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದು ಪಾಕಿಸ್ತಾನದ ಪರ ವಕಾಲತ್ತು ವಹಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಜನಾಕ್ರೋಶ ನೋಡಿ ಉಲ್ಟಾ ಹೊಡೆದರು.
ಅಪರೇಷನ್ ಸಿಂಧೂರ ಉಗ್ರರ ನೆಲೆಗಳನ್ನು ಧ್ವಂಸ ಮಾಡುತ್ತಿದ್ದಂತೆ ಟ್ವೀಟ್ ಮೂಲಕ ಶಾಂತಿ ಜಪ ಮಾಡಿ ಜನರ ಕೈಯಲ್ಲಿ ಉಗಿಸಿಕೊಂಡ ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿ ಟ್ವೀಟ್ ಡಿಲೀಟ್ ಮಾಡಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಈಗ ಏಕಾಏಕಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ಮ್ಯಾಪ್ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಪಾಪಿ ಪಾಕಿಸ್ತಾನದ ಮೇಲೆ ತನಗೆ ಎಷ್ಟು ಪ್ರೀತಿ ಇದೆ ಎಂದು ತೋರಿಸಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಪಾಕಿಸ್ತಾನಿ ಉಗ್ರರ ಸ್ಲೀಪರ್ ಸೆಲ್ ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಅಶೋಕ್ ಟಾಂಗ್ ನೀಡಿದ್ದಾರೆ.