ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡು ಆಗ್ರಹ ಮಾಡಿದೆ.
ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ಸ್ವಾತಂತ್ರ್ಯಕ್ಕಾಗಿ ಮಡಿದ ವೀರ ಯೋಧರನ್ನು ಅಪಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಮೋಹನ್ ಭಾಗವತ್ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು
ಹಾಗೂ ಅವರು ದೇಶದ ಜನರ ಕ್ಷಮೆ ಯಾಚಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.