ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಹಾಗೂ ಕಿರಣ್ ರಿಜಿ಼ಜು಼ ಸಂಸತ್‌ನಲ್ಲಿ ಸಂವಿಧಾನ ಬದಲಾವಣೆಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ
ಅವರ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸಲಾಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.