ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ, ಆದರೆ ಕರ್ನಾಟಕ ಕಾಂಗ್ರೆಸ್ ಮಾತ್ರ, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಪದೇ ಪದೇ ತನ್ನ ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಪಾಕಿಸ್ತಾನದ ಮೇಲಿನ ಅತೀವ ವ್ಯಾಮೋಹದಿಂದ ಕಾಂಗ್ರೆಸ್‌ನಾಯಕರು ಪಾಕಿಸ್ತಾನ ನಮ್ಮ ಶತ್ರು ದೇಶವಲ್ಲ ಎಂದು ಹೇಳಿರುವುದು ಕಾಂಗ್ರೆಸ್‌ನ ಈ ನಡೆಯಿಂದ ಋುಜುವಾತಾಗಿದೆ ಎಂದು ಬಿಜೆಪಿ ಹರಿಹಾಯ್ದಿದೆ.