ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿ ಅವರು 150 ಕೋಟಿ ಕುರಿತು ಮಾಡಿರುವ ಆರೋಪವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನೆಡೆಸಿ ಒತ್ತಾಯಿಸಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿಕೊಂಡು ಸಿಬಿಐ ತನಿಖೆಗೆ ವಹಿಸಬೇಕು.
ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ವಿಜಯೇಂದ್ರ ಅವರು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಕ್ಫ್ ಅಕ್ರಮದ ಬಗ್ಗೆ ತನಿಖೆಯ ಮಾಹಿತಿಯನ್ನು ಬಹಿರಂಗಪಡಿಸದಂತೆ 150 ಕೋಟಿ ಆಮಿಷವೊಡ್ಡಿದ್ದರು ಎಂಬ ಆರೋಪ ಕೇಳಿಬಂದಿದ್ದು ವಿಜಯೇಂದ್ರರನ್ನು ಕೂಡಲೇ ಬಂಧಿಸಬೇಕು, ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹ ಮಾಡಿದರು.