ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡದ್ರೋಹಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ತಮಿಳುನಾಡಿಗೆ ರಾತ್ರೋ ರಾತ್ರಿ ಕಾವೇರಿ ನೀರು ಹರಿಸಿ ಮಂಡ್ಯದ ರೈತರ ಹೊಟ್ಟೆ ಮೇಲೆ ಹೊಡೆದಿದೆ ಎಂದು ಜೆಡಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ, ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ತಮಿಳುನಾಡು ಸರ್ಕಾರದ ಆಜ್ಞೆ ಪಾಲಿಸುತ್ತಿದ್ದಾರೆಯೇ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ರಾಜ್ಯದ ಜನ ಹನಿ ಹನಿ ನೀರಿಗೆ ಹಾಹಾಕಾರ ಪಡುತ್ತಿದ್ದಾರೆ. ಆದರೆ, “ಗುಲಾಮಿ ಕಾಂಗ್ರೆಸ್” ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ʼಮಂಡ್ಯದವರು ಛತ್ರಿಗಳುʼ ಎಂದು ಅವಮಾನ ಮಾಡಿದ್ದ ಡಿಕೆಶಿ, ಇಂಡಿ(INDI) ಮೈತ್ರಿಕೂಟದ ಸ್ಟಾಲಿನ್‌ಸರ್ಕಾರವನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿಯನ್ನು ಬಲಿಕೊಡುತ್ತಿರುವುದು ನಾಚಿಕೆಗೇಡು ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.