ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಬ್ರ್ಯಾಂಡ್‌ಬೆಂಗಳೂರು” ಎಂದು “ಗಾರ್ಬೇಜ್‌ಸಿಟಿ” ಮಾಡಿದ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ಆರೋಪಿಸಿದೆ. ಬೆಂಗಳೂರು ಎಂದರೇ ಗಾರ್ಡನ್ ಸಿಟಿ ಎಂದೇ ವಿಶ್ವವಿಖ್ಯಾತಿ ಪಡೆದಿದೆ. ಆದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗಾರ್ಡನ್ ಸಿಟಿಯನ್ನು “ಗಾರ್ಬೇಜ್ ಸಿಟಿ”ಯನ್ನಾಗಿ ಪರಿವರ್ತಿಸಿದೆ ಎಂದು ಜೆಡಿಎಸ್ ದೂರಿದೆ.
ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಎದ್ದು ಕಾಣಿಸುತ್ತಿದೆ. ಕಸ ವಿಲೇವಾರಿಗೆ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವ ಬದಲು ಅದರಲ್ಲೂ ದುಡ್ಡು ಮಾಡತ್ತಿದೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರ ಸ್ಕ್ಯಾಮ್‌ಸರ್ಕಾರ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಸರ್ಕಾರಕ್ಕೆ ಜನಸಮಾನ್ಯರ ಆರೋಗ್ಯ ರಕ್ಷಣೆ ಬಗ್ಗೆಯೂ ಕಾಳಜಿ ಇಲ್ಲ. ಎರಡು ವರ್ಷವಾಗುತ್ತಾ ಬಂದರೂ ಬೆಂಗಳೂರಿನ ಗುಂಡಿ ಬಿದ್ದಿರುವ ರಸ್ತೆಗಳಿಗೆ ಸರಿಯಾಗಿ ತೇಪೆ ಹಾಕಲು ಸಾಧ್ಯವಾಗಿಲ್ಲ.
ಇದೀಗ ನಗರದೆಲ್ಲೆಡೆ ಕಸದ ಸಮಸ್ಯೆ ಉಲ್ಬಣಿಸಿದೆ. ಇದು ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.