ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಷತ್ ಸದಸ್ಯರಾದ ಸಿ. ಟಿ. ರವಿ ಅವರ ಮೇಲಿನ ಹಲ್ಲೆ ಖಂಡನೀಯ. ಹಣೆಯಿಂದ ರಕ್ತ ಸುರಿಯುತ್ತಿದ್ದರೂ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಅಶೋಕ್ ಕಿಡಿಕಾರಿದ್ದಾರೆ.
ಪ್ರತಿಪಕ್ಷದ ನಾಯಕರಿಗೆ, ಶಾಸಕರಿಗೂ ಪೊಲೀಸ್ ಠಾಣೆ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಕರ್ನಾಟಕವನ್ನು ಕಾಂಗ್ರೆಸ್ ಪಾಕಿಸ್ಥಾನ ಮಾಡಲು ಹೊರಟಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.