‘ಉಚಿತ ಗ್ಯಾರಂಟಿ’ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ‘ಬೆಲೆ ಏರಿಕೆಯ ಗ್ಯಾರಂಟಿ’ ನೀಡಿದೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಕೋಮಾವಸ್ಥೆಯಲ್ಲಿದೆ. ಉಚಿತ ಗ್ಯಾರಂಟಿಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಬೆಲೆ ಏರಿಕೆಯ ಗ್ಯಾರಂಟಿಮೂಲಕ ಸರ್ಕಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟಾಂಗ್ ನೀಡಿದೆ.

ದಿವಾಳಿಯಾಗಿರುವ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು ಹೊಸ ಕ್ಯಾಲೆಂಡರ್ ವರ್ಷದಲ್ಲಿ ಮತ್ತೆ ದರ ಏರಿಕೆ ಮತ್ತು ಬೆಲೆ ಏರಿಕೆಯ ತಮ್ಮ ಹಳೆ ರೆಸಲ್ಯೂಷನ್ ಮೂಲಕ ಸರ್ಕಾರ ನಡೆಸಲು ತೀರ್ಮಾನಿಸಿದಂತಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ಕರ್ನಾಟಕದ ಸಾರಿಗೆ ಇಲಾಖೆಯನ್ನು “ಶಕ್ತಿ” ಹೆಸರಿನಲ್ಲಿ “ನಿಶ್ಯಕ್ತಿ”ಗೊಳಿಸಿದ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಬಸ್ಸಿನ ಚಕ್ರವನ್ನು ಮುನ್ನಡೆಸಲು ಪುರುಷ ಪ್ರಯಾಣಿಕರಿಗೆ ದರ ಏರಿಕೆಯ ಬರೆ ಎಳೆಯಲು ಮುಂದಾಗಿದೆ ಎಂದು ಬಿಜೆಪಿ ದೂರಿದೆ.

ಇಲಾಖೆ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ, ತುಟ್ಟಿಭತ್ಯೆ, ವೇತನ ಹೆಚ್ಚಳದ ಬಾಕಿ ಪಾವತಿಸದಷ್ಟು ಹೀನಾಯ ಸ್ಥಿತಿಗೆ ಸಾರಿಗೆ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ತಂದು ನಿಲ್ಲಿಸಿದೆ.

ಶಕ್ತಿʼಯಿಂದ ಲಾಭವಾಗಿದೆಯೆಂದು ಪುಂಗುವ ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರೇ, ಲಾಭದಲ್ಲಿದ್ದರೆ ಟಿಕೆಟ್ ದರ ಏರಿಕೆ ಯಾಕೆ ಎಂಬುದಕ್ಕೆ ನಿಮ್ಮಲ್ಲಿ ಉತ್ತರವಿದೆಯೇ ? ಎಂದು ಬಿಜೆಪಿ ಪ್ರಶ್ನಿಸಿದೆ.

 

 

 

- Advertisement -  - Advertisement - 
Share This Article
error: Content is protected !!
";