ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಇಂದು ಮತ್ತು ನಾಳೆ ಎರಡು ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡಲಾಗುವುದು. ಶಿಗ್ಗಾಂವಿ ಕ್ಷೇತ್ರದಲ್ಲಿ ಹಿಂದೆಯೂ ಪ್ರಚಾರ ಮಾಡಿದ್ದೇನೆ.
ಕೊನೆಯಲ್ಲಿ ಅಭ್ಯರ್ಥಿಯನ್ನು ನಿಗದಿ ಮಾಡಿದ್ದರಿಂದ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲಾಗಲಿಲ್ಲ. ಈ ಬಾರಿ ಮೂರು ದಿನ ಶಿಗ್ಗಾಂವಿ ಭೇಟಿ ನೀಡುತ್ತಿದ್ದು, ಶಿಗ್ಗಾಂವಿ ಯಲ್ಲಿ ನೂರಕ್ಕೇ ನೂರು ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಬಂದಿತ್ತು. ಈ ಬಾರಿಯೂ ಕೂಡ ನಮಗೆ ಮುನ್ನಡೆ ದೊರೆಯುವ ಪರಿಸ್ಥಿತಿ ಇದ್ದು ನಾವು ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.