ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಜನರು ಕಾಂಗ್ರೆಸ್‌ಗೆ ಬಲವಾದ ಜನಾದೇಶವನ್ನು ನೀಡಿದರು ಕೂಡ ತಮ್ಮದೇ ಆದ ಮುಖ್ಯಮಂತ್ರಿಯನ್ನು ನಂಬಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದು ನಿಂತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆಯ ಮಾತುಕತೆ ಪ್ರೀತಿಯಿಂದ ನಡೆಯುವುದಿಲ್ಲ; ಶಾಸಕರು ವಿಶ್ವಾಸ ಕಳೆದುಕೊಂಡಾಗ ಅದು ನೆಡೆಯುತ್ತದೆ. ಮತ್ತು ಶಾಸಕರು ವಿಶ್ವಾಸ ಕಳೆದುಕೊಂಡರೆ, ಸಿಎಂ ವಿಫಲರಾಗಿದ್ದಾರೆ, ಸರ್ಕಾರ ಕುಸಿದಿದೆ ಮತ್ತು ಪಕ್ಷವು ಈಗಾಗಲೇ ಐಸಿಯುನಲ್ಲಿದೆ ಎಂದರ್ಥ.
ತಮ್ಮದೇ ಮುಖ್ಯಮಂತ್ರಿಯನ್ನು ಬದಲಾಯಿಸಲು ಕಾಂಗ್ರೆಸ್ ಶಾಸಕರು ದೆಹಲಿಯ ಹೋಟೆಲ್‌ಗಳಲ್ಲಿ ಸಾಲುಗಟ್ಟಿ ನಿಂತಿರುವುದು ಯಾವುದೇ ಸರ್ಕಾರ ಪಡೆಯಬಹುದಾದ ದೊಡ್ಡ ವೈಫಲ್ಯದ ಪ್ರಮಾಣ ಪತ್ರವಾಗಿದೆ.
ಮುಖ್ಯಮಂತ್ರಿ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ, ಸರ್ಕಾರ ದಿಕ್ಕನ್ನು ಕಳೆದುಕೊಂಡಿದೆ ಮತ್ತು ಕರ್ನಾಟಕವು 2.5 ವರ್ಷಗಳನ್ನು ಕಳೆದುಕೊಂಡಿದೆ ಎಂದು ನಿಖಿಲ್ ಆರೋಪಿಸಿದರು.

