ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಸತ್ಯವನ್ನು ಹೇಳಿರುವುದು ಕಾಂಗ್ರೆಸ್‌ಸರ್ಕಾರ ಕರ್ನಾಟಕದ ಆರ್ಥಿಕತೆಯನ್ನೇ ಬುಡಮೇಲು ಮಾಡುತ್ತಿರುವುದಕ್ಕೆ ಸಾಕ್ಷಿ ಎಂದು ಜೆಡಿಎಸ್ ಆರೋಪಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯಾಗಿದ್ದು, ಸರ್ಕಾರ ನಡೆಸಲು ಕಷ್ಟವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಬಹಿರಂಗವಾಗಿ ಮಾಜಿ ಸಚಿವ ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಗ್ಯಾರಂಟಿ ಗ್ಯಾರಂಟಿ” ಎಂದು ರಾಜ್ಯದ ಅಭಿವೃದ್ಧಿಯನ್ನು ಹಳ್ಳ ಹಿಡಿಸಿರುವ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ನಿಮ್ಮ ಸರ್ಕಾರದ ದಿವಾಳಿತನವನ್ನು ಕಾಂಗ್ರೆಸ್ಸಿಗರೇ ಬಟ ಬಯಲು ಮಾಡುತ್ತಿದ್ದಾರೆ.
ಎಚ್ಚೆತ್ತುಕೊಳ್ಳಿ… ಕಾಂಗ್ರೆಸ್‌ಆಡಳಿತವಿರುವ ತೆಲಂಗಾಣ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಸರ್ಕಾರ ನಡೆಸಲು ಭಿಕ್ಷೆ ಬೇಡುವಂತಾಗಿದೆ, ಅಂತಹ ದುಸ್ಥಿತಿಯನ್ನು ಕರ್ನಾಟಕಕ್ಕೂ ತರಬೇಡಿ ಎಂದು ಜೆಡಿಎಸ್ ಎಚ್ಚರಿಸಿದೆ.

