ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂವಿಧಾನವೇ ನಮ್ಮ ಧರ್ಮ. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ! ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಅವರು ಭಾಗವಹಿಸಿ ಮಾತನಾಡಿದರು.
ನಮ್ಮ ದೇಶದ ಏಕತೆ ಹಾಗೂ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ಕಾಪಾಡುವಲ್ಲಿ ಸಂವಿಧಾನದ ರಕ್ಷಣೆ ಅತ್ಯಂತ ಅವಶ್ಯಕ. ಎಲ್ಲರೂ ಪ್ರಜಾಪ್ರಭುತ್ವ, ಗಣತಂತ್ರ ಹಾಗೂ ಸಂವಿಧಾನವನ್ನು ಉಳಿಸೋಣ ಎಂದು ಡಿಸಿಎಂ ತಿಳಿಸಿದರು.

