ಜೆಎಂಐಟಿ ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ನಿರ್ಮಿಸಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜೆಎಂಐಟಿ ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ಅಳವಡಿಸುವಂತೆ ಪ್ರಜಾ ಕಲ್ಯಾಣ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಜೆ.ಎಂ.ಐ.ಟಿ. ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿಯಿರುವುದರಿಂದ ದಿನದ ೨೪ ಗಂಟೆಯೂ ಲಾರಿ, ಬಸ್, ಕಾರು, ಆಟೋ, ದ್ವಿಚಕ್ರವಾಹನಗಳು ಸಂಚರಿಸುತ್ತಿರುತ್ತವೆ.

ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಸಾರ್ವಜನಿಕರು, ಲಗೇಜ್ ಆಟೋಗಳ ದಟ್ಟಣೆಯಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿ ಸಾವು-ನೋವುಂಗಳುಂಟಾಗಿದೆ.

ಹಾಗಾಗಿ ಶೀಘ್ರವೇ ಇಲ್ಲಿ ಸ್ಕೈವಾಕ್ ಅಳವಡಿಸಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸುವಂತೆ ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಒತ್ತಾಯಿಸಿದರು.

ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ರಾಜ್ಯ ಸಂಘಟನಾ ಕಾರ್ಯದರ್ಶಿ ಪೂಜಾರಿ ಕರಿಯಪ್ಪ, ಕಾರ್ಯಾಧ್ಯಕ್ಷ ಶ್ರೀನಿವಾಸ್‌ಬಾಬು, ಸುಶೀಲಮ್ಮ, ವಿಜಯಲಕ್ಷ್ಮಿ ಎನ್.ಎ. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಕನ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಮ್ಮ ಈ ಸಂದರ್ಭದಲ್ಲಿದ್ದರು.

 

 

- Advertisement -  - Advertisement -  - Advertisement - 
Share This Article
error: Content is protected !!
";