ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕರ್ನಾಟಕ ಗೃಹ ಮಂಡಳಿ ವತಿಯಿಂದ ಶನಿವಾರ ಆನೇಕಲ್ ತಾಲೂಕಿನ ಸೂರ್ಯನಗರ 4ನೇ ಹಂತದಲ್ಲಿ 100 ಎಕರೆಯಲ್ಲಿ ಒಂದು ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುವ ಕುರಿತು ಚರ್ಚಿಸಲಾಯಿತು.
ಈ ವೇಳೆ ವಸತಿ ಸಚಿವ ಜಮೀರ್ ಅಹಮದ್ ಖಾನ್, ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಆನೇಕಲ್ ಶಾಸಕ ಬಿ. ಶಿವಣ್ಣ ಅವರು ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

