ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ನಗರ ದಿನೇ ದಿನೇ ಬೆಳೆಯುತ್ತಿದ್ದು ಶೌಚಾಲಯ ಸೇರಿದಂತೆ ಇತರೆ ಮೂಲ ಭೂತ ಸೌಕರ್ಯ ಅವಶ್ಯಕತೆ ಇದೆ. ಸಾರ್ವಜನಿಕರಿಗೆ ಹಾಗೂ ಹಳ್ಳಿಯಿಂದ ಬರುವ ವಿದ್ಯಾರ್ಥಿಗಳಿಗೆ
ಶೌಚಾಲಯದ ಅವಶ್ಯಕತೆ ಇದ್ದ ಕಾರಣ ನಗರಸಭೆ ಅಧಿಕಾರಿಗಳು ಹಾಗೂ ಶಾಸಕರು ಮತ್ತು ನಗರಸಭೆ ಸದಸ್ಯರುಗಳು ಸಭೆಯಲ್ಲಿ ತೀರ್ಮಾನ ಮಾಡಿ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ 30 ಲಕ್ಷ ರೂ.ವೆಚ್ಚದಲ್ಲಿ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನಗರಸಭೆ ಅಧ್ಯಕ್ಷೆ ಜೈತುನ್ ಬಿ ಮಲ್ಲಿಕ್ ಸಾಬ್ ನೆರವೇರಿಸಿದರು.
ಪೌರಾಯುಕ್ತ ಜಗರೆಡ್ಡಿ, ನಗರಸಭೆ ಉಪಾಧ್ಯಕ್ಷೆ ಸುಮಕ್ಕ ಭರಮಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ ಮಲ್ಲಿಕಾರ್ಜುನ, ಸದಸ್ಯ ರಮೇಶ್ ಗೌಡ, ರಘು, ಖಾದರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.