ಜನತಾ ಸಮಾವೇಶ ಕುರಿತ ಸಮಾಲೋಚನಾ ಸಭೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಜಯಪುರ ನಗರದ ಸಿಂದಗಿ ಬೈ ಪಾಸ್ ಬಳಿಯ ಸೇವಾಲಾಲ್ ವೃತ್ತದ ಬಳಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ “ಜನತಾ ಸಮಾವೇಶ ” ಕಿತ್ತೂರು ಕರ್ನಾಟಕ ಹಾಗೂ ಬೆಳ್ಳಿ ಹಬ್ಬದ ಸಂಭ್ರಮ ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು  ಹಿರಿಯ ನಾಯಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪರಿಶೀಲನೆ ನಡೆಸಲಾಯಿತು ಎಂದು ತಿಳಿಸಿದರು.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಹೆಚ್ಚು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕರ್ತ ಬಂಧುಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದೆ ಅವರು ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶಂಪೂರ, ಕೋರ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಶಾಸಕರಾದ  ರಾಜುಗೌಡ ಪಾಟೀಲ್, ಶರಣಗೌಡ ಕಂದಕೂರು, ಸಿ.ಎನ್. ಬಾಲಕೃಷ್ಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";