ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಹತ್ಯೆ.
ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬರೆದಿಟ್ಟರೂ, ಪ್ರಿಯಾಂಕ್‌ಖರ್ಗೆ ಅವರ ಆಪ್ತ, ಕೊಲೆಗಾರ ರಾಜು ಕಪನೂರನ್ನು ಬಂಧಿಸದಿರುವುದು ಈ ಕೊಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಭಾಗಿಯಾಗಿದೆ ಎಂಬುದಕ್ಕೆ ಸಾಕ್ಷಿ.
ಸಿಎಂ ಸಿದ್ದರಾಮಯ್ಯ ಅವರೇ, ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ.
ಗುತ್ತಿಗೆದಾರ ಸಚಿನ್‌ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಯಲಿದೆ! ಎಂದು ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.
ಗುತ್ತಿಗೆದಾರ ಸಚಿನ್‌ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪೋಸ್ಟರ್‌ಅಭಿಯಾನ ನಡೆಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್‌ಸದಸ್ಯರಾದ ಸಿ.ಟಿ.ರವಿ, ಪ್ರಮುಖರಾದ ಜಗದೀಶ್‌ಹಿರೇಮನಿ, ಉಮೇಶ್‌ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಕರುಣಾಕರ ಖಾಸಲೆ, ಸಹ ಸಂಚಾಲಕರಾದ ಪ್ರಶಾಂತ್‌ಕೆಡೆಂಜಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.