ವಿವಾದ ಮಾಡೋದು ಬಿಜೆಪಿ ತತ್ವ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಎಂದು ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.

- Advertisement - 

ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ.

ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ! ಎಂದು ಡಿಸಿಎಂ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";