ಯೋಧರ ಕಲ್ಯಾಣಕ್ಕೆ ನಿಗಮ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯೋಧರ ಕಲ್ಯಾಣಕ್ಕೆ ನಿಗಮ! ಸ್ಥಾಪನೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

- Advertisement - 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಜೈ ಹಿಂದ್ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ವೀರ ಯೋಧರಿಗೆ ಕೃತಜ್ಞತೆ, ನಿವೃತ್ತ ಯೋಧರು ಮತ್ತು ಹುತಾತ್ಮ ಯೋಧರ ಕುಟುಂಬಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

- Advertisement - 

ನೂರಾರು ಮಾಜಿ ಯೋಧರು ಮತ್ತು ಹುತಾತ್ಮರ ಕುಟುಂಬಗಳೊಂದಿಗೆ ಈ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಸುದೈವ. ಕಾಂಗ್ರೆಸ್ ಪಕ್ಷವು ಯಾವಾಗಲೂ ದೇಶ ಮತ್ತು ಸಶಸ್ತ್ರ ಪಡೆಗಳ ಜೊತೆ ನಿಲ್ಲುತ್ತದೆ. ಅದಕ್ಕಾಗಿಯೇ ಕಾಂಗ್ರೆಸ್‌ ಶಕ್ತಿ ಈ ದೇಶದ ಶಕ್ತಿ ಎಂದು ಹೇಳುತ್ತಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.

ಮಾಜಿ ಯೋಧರ ಕಲ್ಯಾಣಕ್ಕಾಗಿ ಒಂದು ನಿಗಮ ಸ್ಥಾಪಿಸುವ ಬಗ್ಗೆ ಚಿಂತಿಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ. ಕರ್ನಾಟಕ ಸರ್ಕಾರ ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ಸದಾ ಸಿದ್ಧವಿದೆ ಎಂದು ಅವರು ತಿಳಿಸಿದರು.

- Advertisement - 

Share This Article
error: Content is protected !!
";