ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರ ಎಂಬುದು ಕಾಂಗ್ರೆಸ್ ಪಕ್ಷದ DNA ಯಲ್ಲೇ ಇದೆ ಎಂದು ಜೆಡಿಎಸ್ ಟೀಕಿಸಿದೆ.
ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಹಣ ಕೊಟ್ಟವರಿಗಷ್ಟೇ ಮನೆಗಳನ್ನು ಮಂಜೂರು ಮಾಡುತ್ತಿದ್ದಾರೆ. ಈ ಸತ್ಯ ಹೊರಬಂದರೆ ಸರ್ಕಾರವೇ ಬಿದ್ದು ಹೋಗಲಿದೆ ಎಂದು ಸ್ವಪಕ್ಷದ ಶಾಸಕ ಬಿ.ಆರ್. ಪಾಟೀಲ್ ಹೇಳಿರುವುದು ಕಾಂಗ್ರೆಸ್ಸಿಗರ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಾಕ್ಷಿ ಎಂದು ಜೆಡಿಎಸ್ ಹರಿಹಾಯ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕರಾಳಮುಖವನ್ನು ಸ್ವತಃ ಆಡಳಿತ ಪಕ್ಷದ ಶಾಸಕರುಗಳೇ ಬಿಚ್ಚಿಡುತ್ತಿದ್ದಾರೆ. ವಸತಿ ಇಲಾಖೆಯ ಹಗರಣದ ಕುರಿತು ಶಾಸಕರ ಆಡಿಯೋ ಬಗ್ಗೆ ತನಿಖೆ ಆಗಬೇಕು ಎಂದು ಜೆಡಿಎಸ್ ಪಕ್ಷವು ಒತ್ತಾಯಿಸಿದೆ.