ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೋದಿ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ! NDA ಮೈತ್ರಿಕೂಟದಲ್ಲಿ ಬಿರುಕು ದೊಡ್ಡದಾಗುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ನಿತೀಶ್ ಕುಮಾರ್ ಅವರು ಲಾಲು ಪ್ರಸಾದ್ ಯಾದವ್ ಅವರ ಆಹ್ವಾನಕ್ಕೆ ಅಡ್ಡಗೊಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಮತ್ತೊಂದೆಡೆ NDA ಮಿತ್ರ ಪಕ್ಷಗಳಲ್ಲಿ ಒಂದಾದ ಅಪ್ನಾ ದಳದ ಸಚಿವ ಆಶೀಶ್ ಪಟೇಲ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರೊಂದಿಗೆ ಭಿನ್ನಾಭಿಪ್ರಾಯವಿದೆ ಎಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸರ್ವಾಧಿಕಾರಿ ನಡೆ, ಜನವಿರೋಧಿ ನೀತಿಗಳು, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ‘ಅಚ್ಚೇ ದಿನ‘ದಿಂದ ದೇಶದ ಜನರಿಗೆ ಮುಕ್ತಿ ಕೊಡಿಸುವುದು ಖಚಿತ! ಎಂದು ಕಾಂಗ್ರೆಸ್ ಟೀಕಿಸಿದೆ.