ನಟ ದರ್ಶನ್‌ ವಿರುದ್ದ ಚಾರ್ಜ್ ಶೀಟ್: ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್‌ ತಡೆಯಾಜ್ಞೆ

khushihost

ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇತರ 16 ಮಂದಿ ಜತೆಗೆ ಆರೋಪಿಯಾಗಿರುವ ಕನ್ನಡ ನಟ ದರ್ಶನ್ ತೂಗುದೀಪ ವಿರುದ್ಧದ ಆರೋಪಪಟ್ಟಿಯಲ್ಲಿನ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ, ಮುದ್ರಿಸದಂತೆ ಅಥವಾ ಪ್ರಕಟಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಿ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಮುಂದಿನ ವಿಚಾರಣೆಯವರೆಗೂ ಈ ನಿರ್ಬಂಧ ಜಾರಿಯಲ್ಲಿರುತ್ತದೆ. ಏಕಸದಸ್ಯ ಪೀಠದ ನೇತೃತ್ವದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ನಟ ದರ್ಶನ್‌ ಮನವಿಯ ನಂತರ ಈ ಆದೇಶ ನೀಡಿದರು.ಆರೋಪಪಟ್ಟಿಯಲ್ಲಿನ ಗೌಪ್ಯ ವಿವರಗಳು ಮತ್ತು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾದ ಇತರ ವಸ್ತುಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವಂತೆ ನಟ ದರ್ಶನ್‌ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದರು.

ಪ್ರಕರಣವು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಮೊಕದ್ದಮೆಗೆ ಆಗಸ್ಟ್ 27ರಂದು ಕೆಳ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ, ಮಾಧ್ಯಮಗಳು ಗೌಪ್ಯ ಮಾಹಿತಿಗಳ ಪ್ರಸಾರ ಮುಂದುವರಿಸಿರುವುದನ್ನು ಹೈಕೋರ್ಟ್ ಗಮನಕ್ಕೆ ತಂದರು.

ಅರ್ಜಿದಾರರ ವಾದಗಳಲ್ಲಿ ಅರ್ಹತೆಯನ್ನು ಕಂಡುಕೊಂಡ ನ್ಯಾಯಾಲಯವು ಮುಂದಿನ ವಿಚಾರಣೆಯವರೆಗೂ ಆರೋಪಪಟ್ಟಿಯಿಂದ ಯಾವುದೇ ವಿವರಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಆದೇಶ ನೀಡಿತು.

ಜೊತೆಗೆ, ಆದೇಶದ ಪ್ರತಿಯನ್ನು ಎಲ್ಲಾ ಪ್ರಮುಖ ಮಾಧ್ಯಮಗಳಿಗೂ ಸಹ ರವಾನಿಸುವಂತೆ ಕೋರ್ಟ್ ಸೂಚಿಸಿದೆ.

- Advertisement -  - Advertisement -  - Advertisement - 
Share This Article
error: Content is protected !!
";