ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ ಸರ್ಕಾರದ ಗಮನ ಸೆಳೆಯಲು ಶನಿವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು, ಅಪಘಾತಕ್ಕೆ ಕಾರಣವಾಗುವ ಹಾಗೂ ಜನರ ಜೀವ ಹಾನಿಗೆ ಎಡೆಕೊಡುವ ರಸ್ತೆ ಗುಂಡಿಗಳ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡನೀಯ ನಿಲ್ಲಿಸಬೇಕು ಎಂದು ಆಗ್ರಹಿಸಲಾಯಿತು.
ಶಾಸಕರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಎಸ್.ಸುರೇಶ್ ಕುಮಾರ್, ಎನ್.ಮುನಿರತ್ನ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಮುಖಂಡ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

