ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಯಾನಕ ರೀತಿಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟ ಗೊಂಡಿರುವ ಘಟನೆ ಬೆಂಗಳೂರಿನ ಪುಲಿಕೇಶಿನಗರ ಬಳಿಯ ಕಾಕ್ಸ್ ಟೌನ್‌ಬಳಿ ಜರುಗಿದೆ. ಸ್ಫೋಟದ ರಭಸಕ್ಕೆ ವಸ್ತುಗಳೆಲ್ಲ ಹಾರಿಹೋಗಿದ್ದು, ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಸ್ಫೋಟದ ತೀವ್ರತೆಗೆ ಕಿವಿ ಮುಚ್ಚಿಕೊಂಡು ಕೂದಲೆಳೆ ಅಂತರದಿಂದ ಬಚಾವಾಗಿರುವುದು ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ.
ಸಿಲಿಂಡರ್ ಸ್ಫೋಟ ಸಂಭವಿಸುತ್ತಿದ್ದಂತೆಯೇ ಇಡೀ ಮನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟು ಬೆಂಕಿ ನಂದಿಸಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಬೆಳಗ್ಗೆ ನಾಲ್ಕು ಗಂಟೆಗೆ ಸ್ಫೋಟದ ಸದ್ದು ಕೇಳಿಸಿದ್ದು ಹೊರ ಬಂದು ನೋಡಿದಾಗ ಬೆಂಕಿ ಉರಿಯುತ್ತಿತ್ತು ಎಂದು ಸ್ಥಳೀಯ ನಿವಾಸಿ ಮಾಹಿತಿ ನೀಡಿದ್ದಾರೆ.